ಚಿಕ್ಕಮಗಳೂರು : ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ವಾರ್ಷಿಕ ದತ್ತ ಜಯಂತಿ ಮಹೋತ್ಸವ…

171
firstsuddi

ಚಿಕ್ಕಮಗಳೂರು : ನಗರದ ಗೃಹಮಂಡಳಿ ಬಡಾವಣೆಯ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ವಾರ್ಷಿಕ ದತ್ತ ಜಯಂತಿ ಮಹೋತ್ಸವ ನೂರಾರು ಭಕ್ತರ ನಡುವೆ ಇಂದು ವೈಭವದಿಂದ ನಡೆಯಿತು.
ಜಯಂತಿ ಪ್ರಯುಕ್ತ ಬೆಳಿಗ್ಗೆ ಶ್ರೀ ದತ್ತಾತ್ರೇಯ ಸ್ವಾಮಿಯ ವಿಗ್ರಹ ಮತ್ತು ಪಾದುಕೆಗಳಿಗೆ ಅಭಿಷೇಕ, ವಿಶೇಷ ಪೂಜೆ, ಅಲಂಕಾರ, ನವಗ್ರಹ ಹೋಮ, ಶ್ರೀ ದತ್ತಾತ್ರೇಯ ಹೋಮ ಜರುಗಿತು.
ಈ ವೇಳೆ ಭಕ್ತರಿಂದ ಸಾಮೂಹಿಕ ಭಜನೆ, ನಾಮ ಸಂಕೀರ್ತನೆ ನಡೆದವು, ಮಧ್ಯಾಹ್ನ ಹೋಮದ ಪೂರ್ಣಾಹುತಿ ಮತ್ತು ಮಹಾಮಂಗಳಾರತಿಯ ನಂತರ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.
ಜಯಂತಿ ಪ್ರಯುಕ್ತ ನಗರ ಮತ್ತು ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತರು ಬೆಳಗಿನಿಂದ ಸಂಜೆಯವರೆಗೆ ಮಂದಿರಕ್ಕೆ ಆಗಮಿಸಿ ದತ್ತ ವಿಗ್ರಹ ಮತ್ತು ದತ್ತ ಪಾದುಕೆಗಳ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಕ್ತರಿಗೆ ಹಲವು ನಿಬಂಧನೆಗಳನ್ನು ವಿಧಿಸಲಾಗಿತ್ತು.