ದೇಶದಲ್ಲಿ 16,505 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,03,40,470ಕ್ಕೆ ಏರಿಕೆ…

118
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,505 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,03,40,470ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 214 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,49,649ಕ್ಕೆ ಏರಿಕೆಯಾಗಿದೆ. ದೇಶದಲಿ1,03,40,470ಮಂದಿ ಸೋಂಕಿತರ ಪೈಕಿ ಈವರೆಗೆ 99,46,867ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 2,43,953ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.