ದೇಶದಲ್ಲಿ 16,375 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,03,56,845ಕ್ಕೆ ಏರಿಕೆ…

124
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,375 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,03,56,845ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 201 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,49,850ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,03,56,845ಮಂದಿ ಸೋಂಕಿತರ ಪೈಕಿ ಈವರೆಗೆ 99,75,958ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 2,31,036 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.