ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 20,346 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,03,95,278ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 222 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,50,336ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,03,95,278ಕ್ಕೆ ಮಂದಿ ಸೋಂಕಿತರ ಪೈಕಿ ಈವರೆಗೆ 1,00,16,859ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 2,28,083ಕ್ಕೆ ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










