ಮಹಾರಾಷ್ಟ್ರ : ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 10 ನವಜಾತ ಶಿಶುಗಳು ಸಜೀವದಹನವಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಭಂಡಾರದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಆಸ್ಪತ್ರೆಯ ಐಸಿಯು ಘಟಕದಲ್ಲಿ ಈ ಘಟನೆ ಸಂಭವಿಸಿದ್ದು, ಐಸಿಯುನಲ್ಲಿದ್ದ ಒಟ್ಟು 17 ನವಜಾತ ಶಿಶುಗಳ ಪೈಕಿ 10 ನವಜಾತ ಶಿಶುಗಳು ಸಜೀವದಹನವಾಗಿದ್ದು, 7 ಶಿಶುಗಳನ್ನು ರಕ್ಷಣೆ ಮಾಡಲಾಗಿದೆ.










