ಅಹ್ಮದಾಬಾದ್ : ಗುಜರಾತ್ ನ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಮಾಧವ್ ಸಿಂಗ್ ಸೋಲಂಕಿ(93) ಅವರು ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸೋಲಂಕಿ ಅವರು ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮಾಧವ್ ಸಿಂಗ್ ಸೋಲಂಕಿ ಅವರು 1980ರಲ್ಲಿ ಖಾಮ್ ಹೋರಾಟದ ಮೂಲಕ ರಾಜಕೀಯ ಪ್ರವೇಶಿಸಿದ್ದು, ಗುಜರಾತ್‍ನ ಪ್ರಭಾವಿ ರಾಜಕಾರಣಿಯಾಗಿದ್ದರು. ಅಲ್ಲದೇ ಇವರು ನಾಲ್ಕು ಬಾರಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು ಹಾಗೂ ಭಾರತದ ವಿದೇಶಾಂಗ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ಮಾಧವ್ ಸಿಂಗ್ ಸೋಲಂಕಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡಾ ತಮ್ಮ ಟ್ವಿಟರ್ ಖಾತೆ ಮೂಲಕ ಸಂತಾ ಸೂಚಿಸಿದ್ದು, ಶ್ರೀ ಮಾಧವ್ ಸಿಂಗ್ ಸೋಲಂಕಿ ಅವರು ಅಸಾಧಾರಣ ನಾಯಕರಾಗಿದ್ದರು, ಗುಜರಾತ್ ರಾಜಕೀಯದಲ್ಲಿ ದಶಕಗಳಿಂದ ಪ್ರಮುಖ ಪಾತ್ರ ವಹಿಸಿದ್ದರು. ಅವರು ಸಮಾಜಕ್ಕೆ ಮಾಡಿದ ಸಮೃದ್ಧ ಸೇವೆಗಾಗಿ ಅವರನ್ನು ಸ್ಮರಿಸಲಾಗುವುದು. ಅವರ ನಿಧನದಿಂದ ಬೇಸರವಾಯಿತು. ಶ್ರೀ ಮಾಧವ್ ಸಿಂಗ್ ಸೋಲಂಕಿ ಅವರು ಓದುವುದನ್ನು ಆನಂದಿಸಿದರು ಮತ್ತು ಸಂಸ್ಕೃತಿಯ ಬಗ್ಗೆ ಒಲವು ಹೊಂದಿದ್ದರು. ನಾನು ಅವರನ್ನು ಭೇಟಿಯಾದಾಗ ಅಥವಾ ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾವು ಪುಸ್ತಕಗಳನ್ನು ಚರ್ಚಿಸುತ್ತೇವೆ ಮತ್ತು ಅವರು ಇತ್ತೀಚೆಗೆ ಓದಿದ ಹೊಸ ಪುಸ್ತಕದ ಬಗ್ಗೆ ಹೇಳುತ್ತಿದ್ದರು. ನಾವು ಹೊಂದಿದ್ದ ಸಂವಾದಗಳನ್ನು ನಾನು ಯಾವಾಗಲೂ ಪ್ರೀತಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
Shri Madhavsinh Solanki Ji was a formidable leader, playing a key role in Gujarat politics for decades. He will be remembered for his rich service to society. Saddened by his demise. Spoke to his son, Bharat Solanki Ji and expressed condolences. Om Shanti.
— Narendra Modi (@narendramodi) January 9, 2021










