ಜ. 13 ಅಥವಾ 14ರಂದು ಸಚಿವ ಸಂಪುಟ ವಿಸ್ತರಣೆ-ಬಿ.ಎಸ್. ಯಡಿಯೂರಪ್ಪ.

141
firstsuddi

ಬೆಂಗಳೂರು : ಇಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 54ನೇ ವರ್ಷ ಪುಣ್ಯಸ್ಮರಣೆಯ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ. 13 ಅಥವಾ ಜ. 14ರಂದು ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಬಿಜೆಪಿ ರಾಷ್ಟ್ರೀಯಾ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಲಾಗುತ್ತದೆ. ಅವರ ಅನುಕೂಲಕ್ಕೆ ತಕ್ಕಂತೆ ಜ. 13 ಅಥವಾ 14 ಪ್ರಮಾಣ ವಚನ ಸ್ವೀಕಾರ ಸಮಾರಂಭ ಮಾಡಲಾಗುವುದು. ಈ ಬಾರಿ 7 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಸ್ತರಣೆಯೋ ಅಥವಾ ಪುನರಾಚನೆಯೋ ಮುಂದೆ ನೋಡೋಣ ಎಂದರು.