ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗು ಜನನ…

171
firstsuddi

ಮುಂಬೈ : ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅನುಷ್ಕಾ ಶರ್ಮಾ ಅವರು ಇಂದು ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಮಧ್ಯಾಹ್ನ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ವಿರಾಟ್ ಕೊಹ್ಲಿ ಅವರು ತಂದೆಯಾಗಿರುವ ಸಿಹಿ ಸುದ್ದಿಯನ್ನು ತಮ್ಮ ಇನ್‍ಸ್ಟಾಗ್ರಾಂ ಮೂಲಕ ತಿಳಿಸಿದ್ದು, ಅಭಿಮಾನಿಗಳು ಹಾಗೂ ಭಾರತೀಯ ಕ್ರಿಕೆಟ್ ಮಂಡಳಿ ಅಭಿನಂದನೆಯನ್ನು ತಿಳಿಸಿದೆ.