ಶಿವಮೊಗ್ಗ:ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ: ಸಿಎಂ ಯಡಿಯೂರಪ್ಪ ಪ್ರಕಟ.

157
firstsuddi

ಬೆಂಗಳೂರು : ಶಿವಮೊಗ್ಗದ ಹುಣಸೋಡು – ಅಬ್ಬಲಗೆರೆ ಬಳಿ ಇರುವ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಸಂಭವಿಸಿದ ಭೀಕರ ಸ್ಫೋಟ ಪ್ರಕರಣ ಕುರಿತು ಅಧಿಕಾರಿಗಳಿಂದ ಮಾಹಿತಿ ತರಿಸಿಕೊಂಡಿದ್ದೇನೆ. ಘಟನೆಗೆ ಕಾರಣ ಕುರಿತು ತನಿಖೆ ನಡೆಸಲು ಆದೇಶಿಸಲಾಗಿದೆ, ನಾಳೆ ನಾನೇ ಶಿವಮೊಗ್ಗಕ್ಕೆ ಘಟನೆ ನಡೆದ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು.