ದೇಶದಲ್ಲಿ 9,102 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,06,76,838 ಕ್ಕೆ ಏರಿಕೆ…

111
Firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,102 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,06,76,838 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 117 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,53,587ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,06,76,838 ಮಂದಿ ಸೋಂಕಿತರ ಪೈಕಿ ಈವರೆಗೆ 1,03,45,985ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.