ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,689 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,06,89,527 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 137 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,53,724ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,06,89,527 ಮಂದಿ ಸೋಂಕಿತರ ಪೈಕಿ ಈವರೆಗೆ 1,03,59,305ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










