ಮಂಗಳೂರು :ಪೊಲೀಸ್ ಸಿಬಂದಿ ಮೇಲೆ ಗಂಭೀರ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ ಮೂವರ ಬಂಧನ.

248
ಮಂಗಳೂರು : ಕರ್ತವ್ಯ ನಿರತ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಸಿಬಂದಿ ಮೇಲೆ ಗಂಭೀರ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಣ್ನು ಬಂಟ್ವಾಳ ಅರ್ಕಳ ನಿವಾಸಿ ಇಬ್ರಾಹಿಂ ಶಾಕೀರ್ (19), ಕುದ್ರೋಳಿ ನಿವಾಸಿ ಅಕ್ಬರ್ (30) ಮತ್ತು ಮಹಮ್ಮದ್ ಹನೀಫ್ ಯಾನೆ ಕರ್ಚಿ ಹನೀಫ್ (32) ಎಂದು ಗುರುತಿಸಲಾಗಿದೆ.

ಮಂಗಳೂರು ಡಿಸಿಪಿ ಹರಿರಾಮ್ ಶಂಕರ್, ವಿನಯ್ ಗಾಂವ್ಕರ್ ನಿರ್ದೇಶನದಂತೆ ಮಂಗಳೂರು ಸೆಂಟ್ರಲ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಜಗದೀಶ್ ಮಾರ್ಗದರ್ಶನದಂತೆ ಸವಿತೃ ತೇಜಾ, ಹಾಗೂ ಸಿಬಂದಿಗಳು, ಮತ್ತು ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಗೋವಿಂದ ರಾಜು ಹಾಗೂ ಸಿಬಂದಿಗಳು ಹಾಗು ಸಿಸಿಬಿ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ಹಾಗೂ ಸಿಬಂದಿಗಳು ಆರೋಪಿಗಳ ಪತ್ತೆ ಕಾರ್ಯದಲ್ಲಿ ಶ್ರಮಿಸಿದ್ದಾರೆ.