ದೇಶದಲ್ಲಿ 18,855 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,07,20,048 ಕ್ಕೆ ಏರಿಕೆ…

148
first suddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,855 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,07,20,048 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 163 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,54,010ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,07,20,048 ಮಂದಿ ಸೋಂಕಿತರ ಪೈಕಿ ಈವರೆಗೆ 1,03,94,352 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.