ಮಂಗಳೂರು : ಉಳ್ಳಾಲ ನರ್ಸಿಂಗ್ ಕಾಲೇಜಿನ 40 ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆ, ಕಾಲೇಜು ಸೀಲ್ ಡೌನ್…

200
First suddi

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಉಳ್ಳಾಲದ ಖಾಸಗಿ ನರ್ಸಿಂಗ್ ಕಾಲೇಜಿನ 40 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಫೆಬ್ರವರಿ 19ರವರೆಗೆ ಸೀಲ್ ಡೌನ್ ಮಾಡಲಾಗಿದೆ.
ಈ ಕಾಲೇಜಿನಲ್ಲಿ ವ್ಯಾಸಂಗ ಮಾಡುವವರ ಪೈಕಿ ಹೆಚ್ಚಿನ ಸಂಖ್ಯೆಯಲ್ಲಿ ಕೇರಳದ ವಿದ್ಯಾರ್ಥಿಗಳಿದ್ದು, ಕಾಲೇಜು ಪ್ರಾರಂಭದ ನಂತರ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿತ್ತು. ಅದರಂತೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರ ಪೈಕಿ ನಲವತ್ತು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದ್ದು, ಇದೀಗ ಅವರನ್ನೆಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಉಳ್ಳಾಲ ನಗರಸಭೆಯ ಕಮಿಷನರ್ ಹಾಗೂ ಡಿಎಚ್‍ಓ ಈ ಸಂಬಂಧ ಪರಿಶೀಲನೆ ನಡೆಸಿದ್ದು 19 ದಿನಗಳ ಕಾಲ ಇಡೀ ಕಾಲೇಜನ್ನು ಕಂಟೈನ್ಮೆಂಟ್ ಝೋನ್ ಎಂದು ಗುರುತಿಸಿದ್ದಾರೆ.