ದೇಶದಲ್ಲಿ 12,408 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,08,02,591ಕ್ಕೆ ಏರಿಕೆ…

200
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,408 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,08,02,591ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 120 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,54,823ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,08,02,591ಮಂದಿ ಸೋಂಕಿತರ ಪೈಕಿ ಈವರೆಗೆ 1,04,96,308ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.