ದೆಹಲಿಯ ಕೆಂಪುಕೋಟೆ ಗಲಭೆ : ಮುಖ್ಯ ಆರೋಪಿ ನಟ ದೀಪ್ ಸಿಧು ಅರೆಸ್ಟ್…

155
First Suddi

ನವದೆಹಲಿ : ಜನವರಿ 26 ರಂದು ದೆಹಲಿಯ ಕೆಂಪು ಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿ ರೈತರು ಹಿಂಸಾಚಾರ ನಡೆಸಲು ಪ್ರೇರಣೆ ನೀಡಿದ್ದ ಆರೋಪಿ ನಟ ದೀಪ್ ಸಿಧು ಅವರನ್ನು ಇಂದು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಜನವರಿ 26 ರ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿ ಸಂದರ್ಭದಲ್ಲಿ ದೆಹಲಿಯ ಕೆಂಪು ಕೋಟೆ ಮೇಲೆ ಸಿಖ್ ಧ್ವಜ ಹಾರಿಸಿ ಗಲಭೆಯೆಬ್ಬಿಸುವಂತೆ ರೈತರನ್ನು ಪ್ರೇರೇಪಿಸಿದ್ದ ಎಂಬ ಆರೋಪ ದೀಪ್ ಸಿಧು ಮೇಲಿತ್ತು. ಆ ದಿನ ಕೆಂಪು ಕೋಟೆ ಬಳಿ ಸಾಕಷ್ಟು ಹಿಂಸಾಚಾರ ನಡೆದಿದ್ದು, ಹಲವರಿಗೆ ಗಾಯಗಳಾಗಿದ್ದಲ್ಲದೇ ಸಾಕಷ್ಟು ಆಸ್ತಿಪಾಸ್ತಿಗಳು ಹಾನಿಗೀಡಾಗಿದ್ದವು. . ಪರಿಸ್ಥಿತಿ ನಿಯಂತ್ರಿಸುತ್ತಿದ್ದ ಪೊಲೀಸರ ಮೇಲೆಯೂ ಹಲ್ಲೆ ನಡೆಸಿದ್ದರು. ಘಟನೆ ಬಳಿಕ ಪಂಜಾಬಿ ನಟ ದೀಪ್ ಸಿಧು ತಲೆಮರೆಸಿಕೊಂಡಿದ್ದ. ಇವರ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದರು. ಇದೀಗ 14 ದಿನಗಳಿಂದ ತಲೆಮರೆಸಿಕೊಂಡಿದ್ದ ನಟ ದೀಪ್ ಸಿಧು ಅವರನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.