ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಎಂ.ಎಸ್ ಅನಂತ್ ಅವರು ಆಯ್ಕೆ…

234
First Suddi

ಚಿಕ್ಕಮಗಳೂರು:  ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಎಂ.ಎಸ್ ಅನಂತ್ ಅವರನ್ನು ನೇಮಕ ಮಾಡಲಾಗಿದೆ. ಮೂಡಿಗೆರೆ ತಾಲ್ಲೂಕು ಕಾಂಗ್ರೆಸ್ ವಕ್ತಾರರಾಗಿದ್ದ ಇವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಆದೇಶದಂತೆ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ|| ಕೆ.ಪಿ ಅಂಶುಮಂತ್ ಅವರು ತಿಳಿಸಿದ್ದಾರೆ.