ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,143 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,08,92,746ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 103 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,55,550ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,08,92,746 ಮಂದಿ ಸೋಂಕಿತರ ಪೈಕಿ ಈವರೆಗೆ 1,06,00,625 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










