ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ನ್ಯಾಯಮೂರ್ತಿ, ಎಂ.ರಾಮಾ ಜೋಯಿಸ್(89) ಅವರು ಇಂದು ಬೆಳಗ್ಗೆ ತಮ್ಮ ನಿವಾಸ ರಾಜಾಜಿನಗರದಲ್ಲಿ ವಿಧಿವಶರಾಗಿದ್ದಾರೆ.
1931ರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಜನಿಸಿದ್ದ ರಾಮಾ ಜೋಯಿಸ್ ಅವರು ಶಿವಮೊಗ್ಗದಲ್ಲೇ ಪ್ರಾಥಮಿಕ ಶಿಕ್ಷಣ ಮುಗಿಸಿ ಬಳಿಕ ಬೆಂಗಳೂರಿನಲ್ಲಿ ಕಾನೂನು ಪದವಿಯನ್ನು ಪಡೆದುಕೊಂಡರು. ಸುಪ್ರಿಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಹಾಗೂ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ರಾಮಾ ಜೋಯಿಸ್ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಂದು ಸಂಜೆ 4 ಗಂಟೆಗೆ ಅಂತಿಮ ಸಂಸ್ಕಾರ ನಡೆಯಲಿದ್ದು, ಅವರ ನಿವಾಸ ರಾಜಾಜಿನಗರದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.










