ತುಮಕೂರು : ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಕಂದಕಕ್ಕೆ ಉರುಳಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಾ-ಬುಕ್ಕಾಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕೊರಟಗೆರೆ ತಾಲ್ಲೂಕಿನ ಬೆಟ್ಟಶಮ್ಮನಹಳ್ಳಿಯಲ್ಲಿ ಮದುವೆ ಮುಗಿಸಿದ ಸಂಬಂಧಿಕರು ಬಂಗಾರಹಟ್ಟಿಯಲ್ಲಿ ನಡೆಯುವ ರಿಸೆಪ್ಷನ್ಗೆ ಬಸ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಬಸ್ ಮೇಕೆರಹಳ್ಳಿ ಕ್ರಾಸ್ ಬಳಿ ಕಂದಕಕ್ಕೆ ಉರುಳಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, 40 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರನ್ನು ಕಿಟ್ಟಪ್ಪ ಹಾಗೂ ಭಾಗ್ಯಮ್ಮ ಎಂದು ಗುರುತಿಸಲಾಗಿದ್ದು, ಇನ್ನೊಬ್ಬರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈ ದುರಂತಕ್ಕೆ ರಸ್ತೆ ಕಾಮಗಾರಿಯೇ ಕಾರಣ ಎನ್ನಲಾಗಿದೆ.










