ದೇಶದಲ್ಲಿ 14,199 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,10,05,850ಕ್ಕೆ ಏರಿಕೆ…

93
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,199 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,10,05,850ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 83 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,56,385ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,10,05,850 ಮಂದಿ ಸೋಂಕಿತರ ಪೈಕಿ ಈವರೆಗೆ 1,06,99,410 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.