ರಾಯಚೂರು : ಹೆತ್ತಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ತಂದೆ!

134
First Suddi

ರಾಯಚೂರು : ಹೆತ್ತ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಯರಜಂತಿ ಗ್ರಾಮದಲ್ಲಿ ನಡೆದಿದೆ.
ಮಾನಮ್ಮ (14) ತಂದೆಯಿಂದ ಕೊಲೆಯಾದ ಮಗಳು. ಆರೋಪಿ ತಿಮ್ಮಯ್ಯ ಮೋನಮ್ಮಳನ್ನು ಕೊಡಲಿಯಿಂದ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.