ಚಿಕ್ಕಬಳ್ಳಾಪುರ ಕಲ್ಲು ಕ್ವಾರಿ ದುರಂತ : ಜಿಲೆಟಿನ್ ಸ್ಫೋಟಗೊಂಡು 6 ಮಂದಿ ಸಾವು…

124
First Suddi

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಕಲ್ಲು ಕ್ವಾರಿ ದುರಂತ ಸಂಭವಿಸಿದ್ದು, ಜಿಲೆಟಿನ್ ಸ್ಫೋಟಗೊಂಡು ಆರು ಮಂದಿ ಸಾವನ್ನಪ್ಪಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಗ್ರಾಮದ ಬಳಿ ಜಿಲೆಟಿನ್‌ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹಗಳು ದೇಹಗಳು ಗುರುತು ಸಿಗಲಾರದಷ್ಟು ಛಿದ್ರಛಿದ್ರವಾಗಿವೆ. ಇನ್ನೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.