ಚಿಕ್ಕಬಳ್ಳಾಪುರ ತಾಲ್ಲೂಕಿನ ಹೀರೆನಾಗವೇಲಿ ಸಮೀಪದ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟಗೊಂಡು ಆರು ಮಂದಿ ಮೃತಪಟ್ಟಿದ್ದು, ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕದ ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣದಲ್ಲಿ ಹಲವಾರು ಮಂದಿ ಸಾವನ್ನಪ್ಪಿದ್ದು, ಘಟನೆ ಸಾಕಷ್ಟು ನೋವನ್ನು ಉಂಟುಮಾಡಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಹಾಗೂ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ ಎಂದು ಪಿಎಂ ಮೋದಿ ಅವರು ಟ್ವೀಟ್ ಮಾಡಿದ್ದಾರೆ.










