ದೇಶದಲ್ಲಿ 13,742 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,10,30,176ಕ್ಕೆ ಏರಿಕೆ…

111
First Suddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,742 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,10,30,176ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 104 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,56,567ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,10,30,176 ಮಂದಿ ಸೋಂಕಿತರ ಪೈಕಿ ಈವರೆಗೆ 1,07,26,702 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.