ಬೆಳಗಾವಿ : ಕಿಡ್ನಾಪ್ ಆಗಿ ವೇಶ್ಯಾವಾಟಿಕೆಯಲ್ಲಿ ಸಿಲುಕಿಕೊಂಡಿದ್ದ ಯುವತಿಯ ರಕ್ಷಣೆ…

109
First Suddi

ಬೆಳಗಾವಿ : ಕಿಡ್ನಾಪ್ ಆಗಿ ವೇಶ್ಯಾವಾಟಿಕೆಯಲ್ಲಿ ಸಿಲುಕಿಕೊಂಡಿದ್ದ ಉತ್ತರ ಪ್ರದೇಶದ ಯುವತಿಯನ್ನು ಬೆಳಗಾವಿಯ ಎಪಿಎಂಸಿ ಠಾಣೆಯ ಪೊಲೀಸರು ರಕ್ಷಣೆ ಮಾಡಿ ಪೋಷಕರ ಮಡಿಲಿಗೆ ಸೇರಿಸಿದ್ದಾರೆ.

ಫೆ.7ರಂದು ಬೆಳಗಾವಿಯ ಸದಾಶಿವನಗರದ ಮನೆಯೊಂದರರಲ್ಲಿ ನಡೆಯುತ್ತಿರುವ ಹೈಟೆಕ್ ವೇಶ್ಯಾವಾಟಿಕೆ ಜಾಲದ ಮೇಲೆ ಬೆಳಗಾವಿ ಎಪಿಎಂಸಿ ಠಾಣೆ ಸಿಪಿಐ ಜಾವೇದ್ ಮುಷಾಪುರೆ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ವೇಳೆ ಇಬ್ಬರು ಯುವತಿಯರನ್ನು ಎಪಿಎಂಸಿ ಠಾಣೆ ಪೊಲೀಸರು ರಕ್ಷಣೆ ಮಾಡಿದ್ದಾರೆ.

ವೇಶ್ಯಾವಾಟಿಕೆಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಯುವತಿಯರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿತ್ತು. ವಿಚಾರಣೆ ವೇಳೆ ಓರ್ವ ಯುವತಿಯ ವಿಳಾಸವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. 2017ರಲ್ಲಿ ಉತ್ತರಪ್ರದೇಶದ ಗಾಜಿಯಾಬಾದ್ ಠಾಣೆಯಲ್ಲಿ ಈ ಯುವತಿ ಅಪಹರಣವಾಗಿದ್ದ ಬಗ್ಗೆ ಕೇಸ್ ದಾಖಲಾಗಿದ್ದ ಮಾಹಿತಿ ದೊರಕಿದ್ದು, ಯುವತಿ ತಂದೆ ಉತ್ತರಪ್ರದೇಶ ಪೊಲೀಸರೊಂದಿಗೆ ಬೆಳಗಾವಿಗೆ ಬಂದು ಅವರ ಮಗಳನ್ನು ಕರೆದುಕೊಂಡು ಹೋಗಿದ್ದಾರೆ. ಎಪಿಎಂಸಿ ಪೊಲೀಸರು ಹಾಗೂ ಮಹಿಳಾ ಸಾಂತ್ವನ ಕೇಂದ್ರದ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.