ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ- ಜೆಡಿಎಸ್ ಅಭ್ಯರ್ಥಿಗೆ ಮೇಯರ್ ಪಟ್ಟ!

137
First Suddi

ಮೈಸೂರು : ಇಂದು ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್‌-ಉಪಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸಾಧಿಸಿವೆ. ನೂತನ ಮೇಯರ್ ಆಗಿ ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ಅವರು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಅನ್ವರ್‌ ಬೇಗ್‌‌ ಅವರಿಗೆ ಉಪಮೇಯರ್‌ ಸ್ಥಾನ ಲಭಿಸಿದೆ.

ಕೈ ಸದಸ್ಯರಿಂದ ಜೆಡಿಎಸ್ ಅಭ್ಯರ್ಥಿಗೆ ಸಹಕಾರ ದೊರೆತಿದ್ದು, ಬಿಜೆಪಿಯು ಮೊದಲ ಬಾರಿ ಮೇಯರ್ ಪಟ್ಟ ಅಲಂಕರಿಸುವ ಕನಸು ನುಚ್ಚುನೂರಾಗಿದೆ. ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ಅವರು 43 ಮತಗಳ ಮೂಲಕ ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.