ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಷರ್ ಮಾಲೀಕ ಹಾಗೂ ಬಿಜೆಪಿ ಮುಖಂಡ ನಾಗರಾಜು ರೆಡ್ಡಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಫೋಟದ ಬಳಿಕ ತಮಿಳುನಾಡಿನ ಹೊಸೂರಿನಲ್ಲಿ ತಲೆಮರೆಸಿಕೊಂಡಿದ್ದ ಮುಖ್ಯ ಆರೋಪಿಗಳಾದ ನಾಗರಾಜು ರೆಡ್ಡಿ ಹಾಗೂ ಗಣೇಶ್ ಎಂಬಾತನನ್ನು ಇಂದು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಿನ್ನೆ ಎ2 ಆರೋಪಿ, ಕ್ರಷರ್ ಮಾಲಿಕ ರಾಘವೇಂದ್ರ ರೆಡ್ಡಿ, ವೆಂಕಟಶಿವ ರೆಡ್ಡಿ, ಪ್ರವೀಣ್, ರಿಯಾಜ್ ಮತ್ತು ಮಧುಸೂಧನ್ ಎಂಬ ಐವರನ್ನು ಬಂಧಿಸಲಾಗಿತ್ತು. ಇಂದು ಮತ್ತೆ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನು ಐವರು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ದುರಂತ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಗುಡಿಬಂಡೆ ಎಸ್ಐ ಗೋಪಾಲ್ ರೆಡ್ಡಿ ಹಾಗೂ ಇನ್ ಸ್ಪೆಕ್ಟರ್ ಮಂಜುನಾಥ್ ರನ್ನು ಅಮಾನತು ಮಾಡಲಾಗಿದೆ.










