ಶಿವಮೊಗ್ಗ : ಒಣಗಿದ ಮರ ಬಿದ್ದು 5 ವರ್ಷದ ಮಗು ಸಾವು…

112
Firstsuddi

ಶಿವಮೊಗ್ಗ : ರಸ್ತೆಯಲ್ಲಿ ಹೋಗುತ್ತಿದ್ದ ಮಗುವಿನ ಮೇಲೆ ಒಣಗಿದ ಮರ ಬಿದ್ದ ಪರಿಣಾಮ 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಸಾಗರ ತಾಲ್ಲೂಕಿನ ಚಿಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.

ಪ್ರತಿಕ್ಷಾ (5) ಸಾವನ್ನಪ್ಪಿದ ಬಾಲಕಿ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ ರಸ್ತೆ ಬದಿಯಲ್ಲಿ ಒಣಗಿ ನಿಂತಿದ್ದ ಮರ ಏಕಾಏಕಿ ಮಗು ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಪ್ರತೀಕ್ಷಾಳನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಪ್ರತಿಕ್ಷಾಳ ತಂದೆ ಕಳೆದ 6 ತಿಂಗಳ ಹಿಂದೆ ಸಾವನ್ನಪ್ಪಿದ್ದು, ತಾಯಿ ಪ್ರೇಮ ಮನೆ ಗೆಲಸ ಮಾಡಿಕೊಂಡು ಮೂವರು ಹೆಣ್ಣು ಮಕ್ಕಳನ್ನು ಸಾಕುತ್ತಿದ್ದರು. ಆದರೆ ಇದೀಗ ಪ್ರತಿಕ್ಷಾ ಸಹ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.