ಹುಬ್ಬಳ್ಳಿ : ಮಗುವಿಗೆ ಹಾಲುಣಿಸುತ್ತಿರುವಾಗ ಪಾಪಿ ಪತಿ, ಪತ್ನಿಯ ಎದೆಗೆ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಘಟನೆ ಗಂಗಾಧರ್ ನಗರದಲ್ಲಿ ನಡೆದಿದೆ.
ನಿತ್ಯ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಆದರೆ, ಇಂದು ಬೆಳಗ್ಗೆ ಜಗಳ ವಿಕೋಪಕ್ಕೆ ತಿರುಗಿದೆ. ಎರಡು ತಿಂಗಳ ಮಗುವಿಗೆ ತಾಯಿ ಸಂಗೀತಾ ಹಾಲುಣಿಸುತ್ತಿದ್ದ ವೇಳೆ ಪತಿ ಸುನೀಲ್ ಪತ್ನಿಯ ಎದೆ ಭಾಗಕ್ಕೆ ಬ್ಲೇಡ್ನಿಂದ ಹಲ್ಲೆ ಮಾಡಿದ್ದಾನೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಮಗುವಿಗೆ ಯಾವುದೇ ಪ್ರಾಣಪಾಯವಾಗಿಲ್ಲ. ಘಟನೆ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










