ಈ ಬಾರಿ ಜನರ ನಿರೀಕ್ಷೆಗೆ ತಕ್ಕಂತೆ ಒಳ್ಳೆಯ ಬಜೆಟ್ ಕೊಡುತ್ತೇನೆ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

109
Firstsuddi

ಬೆಂಗಳೂರು : 79ನೇ ಜನ್ಮದಿನದ ಪ್ರಯುಕ್ತ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಬರಲಿರುವ ರಾಜ್ಯ ಬಜೆಟ್ ಬಗ್ಗೆ ಮಾಹಿತಿ ಹಂಚಿಕೊಂಡರು.

ಈ ಬಗ್ಗೆ ಮಾತನಾಡಿದ ಅವರು, ಈ ಬಾರಿ ಜನರ ನಿರೀಕ್ಷೆಗೆ ತಕ್ಕಂತೆ ಒಳ್ಳೆಯ ಬಜೆಟ್ ಕೊಡುತ್ತೇನೆ, ಜನ ನೆಮ್ಮದಿಯಿಂದ ಜೀವನ ಮಾಡಲು ಬೇಕಾದ ಎಲ್ಲ ಸೌಕರ್ಯವನ್ನು ಒದಗಿಸುವುದೇ ನನ್ನ ಗುರಿ ಎಂದರು. ಪ್ರಧಾನಿ ಮೋದಿಯವರ ಸರ್ಕಾರದ ಬಗ್ಗೆ ಮಾತನಾಡಿದ ಬಿಎಸ್‍ವೈ, ಪ್ರಧಾನಿ ಮೋದಿಯವರ ಸರ್ಕಾರದಲ್ಲಿ ಇನ್ನಷ್ಟು ಒಳ್ಳೆಯ ಕೆಲಸಗಳು ಆಗಲಿ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಲಿ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.