ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದಿಂದ ಬುಮ್ರಾ ಅವರನ್ನು ಕೈಬಿಟ್ಟ ಬಿಸಿಸಿಐ…

134
Firstsuddi

ಅಹ್ಮದಾಬಾದ್ : ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದಿಂದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಬಿಸಿಸಿಐ ಕೈಬಿಟ್ಟಿದೆ.

ಜಸ್ಪ್ರೀತ್ ಬುಮ್ರಾ ಅವರು ವೈಯಕ್ತಿಕ ಕಾರಣದಿಂದಾಗಿ ತಂಡದಿಂದ ಹೊರಗುಳಿಯಲು ಅವಕಾಶ ಕೊಡುವಂತೆ ಬಿಸಿಸಿಐಗೆ ಮನವಿ ಮಾಡಿಕೊಂಡಿದ್ದರು. ಅದರಂತೆ ಮನವಿಯನ್ನು ಪುರಸ್ಕರಿಸಿರುವ ಬಿಸಿಸಿಐ ನಾಲ್ಕನೇ ಟೆಸ್ಟ್ ಪಂದ್ಯದಿಂದ ಬುಮ್ರಾ ಅವರನ್ನು ಬಿಡುಗಡೆ ಮಾಡಲಾಗಿದ್ದು, ಅವರು ನಾಲ್ಕನೇ ಟೆಸ್ಟ್ ನಲ್ಲಿ ಆಡುವುದಿಲ್ಲ.  ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.