ನವದೆಹಲಿ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಅಸ್ಸಾಂನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಬಿಸ್ವಾಂತ್ ಜಿಲ್ಲೆಯಲ್ಲಿನ ಸಾಧುರು ಚಹಾ ತೋಟದಲ್ಲಿ ಮಹಿಳಾ ಕಾರ್ಮಿಕರೊಂದಿಗೆ ಟೀ ಸೊಪ್ಪನ್ನು ಕೊಯ್ದಿದಿರುವ ಫೋಟೋಗಳನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲರ ಗಮನ ಸೆಳೆದಿದೆ.
ಸುಂದರ ಕ್ಷಣಗಳ ಕೆಲವು ಫೋಟೋಗಳನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕ ಗಾಂಧಿ ಅವರು ಟೀ ತೋಟ ಕಾರ್ಮಿಕರ ಜೀವನವು ಸತ್ಯ ಮತ್ತು ಸರಳತೆಯಿಂದ ಕೂಡಿದೆ ಹಾಗೂ ಅವರ ಶ್ರಮ ದೇಶಕ್ಕೆ ಅಮೂಲ್ಯವಾಗಿದೆ. ಇಂದು ಅವರೊಂದಿಗೆ ಕುಳಿತು ಅವರ ಕುಟುಂಬದ ಯೋಗಕ್ಷೇಮ ಮತ್ತು ಅವರ ಜೀವನದ ಕಷ್ಟಗಳ ಅನುಭವವನ್ನು ತಿಳಿದುಕೊಂಡೆ. ಅವರಿಂದ ನನಗೆ ದೊರೆತ ಪ್ರೀತಿ ನಾನು ಎಂದಿಗೂ ಮರೆಯುವುದಿಲ್ಲ ಎಂದು ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.










