ಕೊರೊನಾ ಲಸಿಕೆ ಹಾಕಿಸಿಕೊಂಡ ರಾಷ್ಟ್ರಪತಿ ರಾಮನಾಥ್ ಕೋವಿಂದ್.

94
Firstsuddi

ನವದಹಲಿ : ಕೋವಿಡ್ ವಿರುದ್ಧ ಮೂರನೇ ಹಂತದ ಲಸಿಕಾ ಅಭಿಯಾನ ಪ್ರಾರಂಭವಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೆಹಲಿಯ ಆರ್ಮಿ (ರಿಸರ್ಚ್ ಆ್ಯಂಡ್ ರೆಫರಲ್) ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡಿದ್ದಾರೆ.

ಇಂದು ಬೆಳಗ್ಗೆ ನೇರವಾಗಿ ಆಸ್ಪತ್ರೆಗೆ ತೆರಳಿದ ರಾಷ್ಟ್ರಪತಿಗಳು ಅಲ್ಲಿನ ಸಿಬ್ಬಂದಿಯಿಂದ ತಮ್ಮ ಎಡಗೈಗೆ ಲಸಿಕೆ ಹಾಕಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಕೋವಿಂದ್ ಅವರು, ‘ವಿಶ್ವದ ಅತಿ ದೊಡ್ಡ ಕೋವಿಡ್ ಲಸಿಕಾ ವಿತರಣೆ ಕಾರ್ಯಕ್ರಮದ ಬಗ್ಗೆ ತುಂಬಾ ಹೆಮ್ಮೆ ಇದ್ದು, ಎರಡು ಲಸಿಕೆಗಳನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿದೆ’ ಎಂದು ಹೇಳುವ ಮೂಲಕ ಲಸಿಕೆ ಪಡೆಯಲು ಅರ್ಹರಾದ ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.