ನವದೆಹಲಿ : ಆಗ್ರಾದಲ್ಲಿರುವ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ ಇಂದು ನಡೆದಿದೆ.
ಕಿಡಿಗೇಡಿಯೊಬ್ಬ 112 ನಂಬರ್ ಗೆ ಕರೆಮಾಡಿ ಪ್ರೇಮಸೌಧ ತಾಜ್ ಮಹಲ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಹೆದರಿಸಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರ ತಂಡ ಪ್ರವಾಸಿಗರನ್ನು ಹೊರಗೆ ಕಳುಹಿಸಿ ನಿರ್ಬಂಧ ಹೇರಲಾಗಿದೆ. ಜೊತೆಗೆ ತಾಜ್ ಮಹಲ್ ಎಲ್ಲಾ ದ್ವಾರಗಳನ್ನ ಬಂದ್ ಮಾಡಿ ಭದ್ರತೆ ಬಿಗೊಳಿಸಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ತಾಜ್ ಮಹಲ್ ಸುತ್ತಾಮುತ್ತಾ ಬಾಂಬ್ ಗಾಗಿ ಹುಡುಕಾಟ ನಡೆಸಲಾಗುತ್ತಿದೆ.










