ಕಬ್ಬಡಿ ಪಂದ್ಯಾವಳಿ ವೇಳೆ ಗಲಾಟೆ : ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ ಅರೆಸ್ಟ್!

143
Firstsuddi

ಶಿವಮೊಗ್ಗ : ನಗರದಲ್ಲಿನ ಭದ್ರಾವತಿ ಪ್ರೊ ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ಪುತ್ರ ಬಸವೇಶ್ ಅವರನ್ನು ಭದ್ರಾವತಿ ಓಲ್ಡ್ ಟೌನ್ ಪೊಲೀಸರು ಬಂಧಿಸಿದ್ದಾರೆ.

ಫೆ.28 ರ ರಾತ್ರಿ ಭದ್ರಾವತಿಯಲ್ಲಿ ನಡೆದಿದ್ದ ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ಬಿಜಿಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಶಾಸಕ ಸಂಗಮೇಶ್ ಪುತ್ರ ಹಾಗೂ ಸಹೋದರನ ಪುತ್ರರು ತಂಡದ ಮೇಲೆ ಹಲ್ಲೆ ಮಾಡಿದ್ದು, ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಗಾಯಗೊಂಡು ಆಸ್ಪತ್ರೆ ಸೇರಿದ್ದರು.

ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಬಸವೇಶ್‍ನನ್ನು ನಿನ್ನೆ ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 15 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.