ದೇಶದಲ್ಲಿ 17,921 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,12,62,707ಕ್ಕೆ ಏರಿಕೆ…

109
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,921 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,12,62,707ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 133 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,58,063ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,12,62,707 ಮಂದಿ ಸೋಂಕಿತರ ಪೈಕಿ ಈವರೆಗೆ 1,09,20,046 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.