ಚೆನ್ನೈ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು 14ನೇ ಆವೃತ್ತಿಯ ಐಪಿಎಲ್ ಟೂರ್ನಿಗಾಗಿ ಮೈದಾನಕ್ಕಿಳಿದು ಅಭ್ಯಾಸ ಆರಂಭಿಸಿದ್ದಾರೆ.
ಐಪಿಎಲ್ ಟೂರ್ನಿ ಏಪ್ರಿಲ್ 9 ರಿಂದ ಪ್ರಾರಂಭವಾಗಲಿದ್ದು, ಐಪಿಎಲ್ ಟೂರ್ನಿಯಲ್ಲಿ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಮಾತ್ರ ಆಡಲಿದ್ದಾರೆ. 2020ರ 13ನೇ ಆವೃತ್ತಿಯ ಐಪಿಎಲ್ ನಲ್ಲಿ ಭಾಗವಹಿಸಿದ ಬಳಿಕ ಇದೀಗ 2021ನೇ 14 ನೇ ಆವೃತ್ತಿಯ ಐಪಿಎಲ್ ಪಂದ್ಯವಾಡಲು ಧೋನಿ ಅವರು ಚೆನ್ನೈನಲ್ಲಿ ಅಭ್ಯಾಸ ಆರಂಭಿಸಿದ್ದಾರೆ.










