ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,291 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,13,85,339ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 118 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,58,725ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,13,85,339 ಮಂದಿ ಸೋಂಕಿತರ ಪೈಕಿ ಈವರೆಗೆ 1,10,07,352 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










