ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 24,492 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,14,09,831ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 131 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,58,856ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,14,09,831 ಮಂದಿ ಸೋಂಕಿತರ ಪೈಕಿ ಈವರೆಗೆ 1,10,27,543 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










