ಜನರು ಆತಂಕಕ್ಕೊಳಗಾಗುವುದು ಬೇಡ, ಯಾವುದೇ ಲಾಕ್ ಡೌನ್, ನೈಟ್ ಕರ್ಫ್ಯೂ ಇಲ್ಲ : ಸಿಎಂ.

241
Firstsuddi

ಬೆಂಗಳೂರು : ಜನರು ಯಾವುದೇ ಆತಂಕಕ್ಕೊಳಗಾಗುವುದು ಬೇಡ, ಯಾವುದೇ ಲಾಕ್ ಡೌನ್, ನೈಟ್ ಕರ್ಫ್ಯೂ ಇಲ್ಲ. ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಸ್ಪಷ್ಟ ಪಡಿಸಿದ್ದಾರೆ.

ಇಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವೀಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ಭಯ ಸೃಷ್ಟಿಸುವ ಅಗತ್ಯವಿಲ್ಲ.ಲಸಿಕೆ ತಯಾರಿಕೆಗೆ ಎಲ್ಲ ಅವಕಾಶಗಳ ಬಳಕೆಗೆ ರಾಜ್ಯಗಳು ಸಹಕಾರ ಕೊಡುವಂತೆ ಕೇಳಿಕೊಂಡರು. ಪರೀಕ್ಷೆಗಳ ಸಂಖ್ಯೆ ಹೆಚ್ಚಳ ಮಾಡುವಂತೆ ತಿಳಿಸಿದ್ದಾರೆ. ಮಾಸ್ಕ್ ಹಾಕುವುದನ್ನು ಕಡ್ಡಾಯ ಮಾಡುವುದು, ಸೋಂಕು ಹೆಚ್ಚಳ ಇರುವ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾವಹಿಸುವಂತೆ ಪ್ರಧಾನಿ ಸೂಚನೆ ನೀಡಿದರು ಎಂದು ಸಿಎಂ ತಿಳಿಸಿದರು .

ಟೆಸ್ಟ್, ಟ್ರ್ಯಾಕ್, ಟ್ರೀಟ್ ಈ ಮೂರು ಟಿಗಳ ಬಗ್ಗೆ ಪ್ರಧಾನಿಗಳು ಒತ್ತಿ ಹೇಳಿದ್ದು, ಮೈಕ್ರೋ ಕಂಟೇನ್ಮೆಂಟ್ ವಲಯಗಳಲ್ಲಿ ಹೆಚ್ಚಿನ ನಿಗಾವಹಿಸುವಂತೆ ತಿಳಿಸಿದ್ದಾರೆ. ಅಗತ್ಯವಿದ್ದರೆ ಮೈಕ್ರೋ ಕಂಟೈನ್ಮೆಂಟ್ ಝೋನ್ಗಳನ್ನು ಮಾಡುವಂತೆ ತಿಳಿಸಲಾಗಿದೆ ಎಂದು ಸಿಎಂ ವಿವರಿಸಿದರು.

ರಾಜ್ಯದಲ್ಲಿ ಕಳೆದ ಹತ್ತು ದಿನಗಳಲ್ಲಿ ಕೊರೊನಾ ಪ್ರಕರಣ ಏರಿಕೆಯಾಗಿವೆ. ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಪರೀಕ್ಷೆ ಹೆಚ್ಚಳ ಮಾಡಲು ನಿರ್ಧರಿಸಲಾಗುವುದು. ಜನ ಸೇರುವ ಕಡೆ ಮುನ್ನೆಚ್ಚರಿಕೆಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ತಡೆಯಲು ಕ್ರಮ ವಹಿಸಲು ಪ್ರಧಾನಿ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದರು.

ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ತಿಳಿಸಿದ್ದು, ಈ ಕುರಿತು ಸಹ ಕ್ರಮ ವಹಿಸಲಾಗುತ್ತಿದೆ. ಎರಡು ಮತ್ತು 3ನೇ ಹಂತದ ನಗರಗಳು ಮತ್ತು sಸುತ್ತಮುತ್ತ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಿ. ಸಣ್ಣ ಪಟ್ಟಣಗಳಲ್ಲಿ ರೆಫರಲ್ ವ್ಯವಸ್ಥೆ ಮತ್ತು ಅಂಬುಲೆನ್ಸ್ ವ್ಯವಸ್ಥೆಗಳನ್ನು ಬಲಪಡಿಸಲು ಸೂಚಿಸಿದರು. ಇನ್ನು, ಲಸಿಕೆಗಳು ವ್ಯರ್ಥ ಆಗೋದನ್ನು ತಡೆಯಲು ಸೂಚಿಸಿದ್ದಾರೆ ಎಂದರು.