ಚಿಕ್ಕಮಗಳೂರು ನಗರದ ಶ್ರೀಕಾಮಧೇನು ಗಣಪತಿ ಕ್ಷೇತ್ರದಲ್ಲಿ ವಾರ್ಷಿಕ ಬ್ರಹ್ಮರಥೋತ್ಸವ

388

ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಶ್ರೀಕಾಮಧೇನು ಗಣಪತಿ ಕ್ಷೇತ್ರದಲ್ಲಿ ವಾರ್ಷಿಕ ಬ್ರಹ್ಮರಥೋತ್ಸವ ಇತ್ತೀಚೆಗೆ ವೈಭವದಿಂದ ನಡೆಯಿತು. ಉತ್ಸವದ ಪ್ರಯುಕ್ತ ಕ್ಷೇತ್ರದ ಅಧಿದೇವತೆಗಳಿಗೆ ಅಭಿಷೇಕ, ವಿಶೇಷಪೂಜೆ, ವಿವಿಧ ಹೋಮಗಳು ಜರುಗಿದವು, ಮಹಾಮಂಗಳಾರತಿ ನಂತರ ಶ್ರೀ ಕಾಮಧೇನು ಗಣಪತಿ, ಶ್ರೀಕಂಠೇಶ್ವರ, ಸುಬ್ರಮಣ್ಯ ಮತ್ತು ರಾಜರಾಜೇಶ್ವರಿದೇವಿಯ ಉತ್ಸವ ಮೂರ್ತಿಗಳನ್ನು ಸಾಲಂಕೃತಗೊಂಡು ಸಜ್ಜಾಗಿ ನಿಂತಿದ್ದ ಬ್ರಹ್ಮ ರಥದಲ್ಲಿ ಪ್ರತಿಷ್ಠಾಪಿಸಿ ಪೂಜಿಸಲಾಯಿತು.

ನಂತರ ನೂರಾರು ಭಕ್ತರ ನಡುವೆ ಬ್ರಹ್ಮ ರಥವನ್ನು ಎಳೆಯಲಾಯಿತು, ಸಾರ್ವಜನಿಕ ಅನ್ನ ಸಂತರ್ಪಣೆ ಜರುಗಿತು, ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಗಮದ ಅಧ್ಯಕ್ಷ ಎ.ಎನ್.ಮಹೇಶ್, ನಗರಸಭೆ ಅಧ್ಯಕ್ಷೆ ಶಿಲ್ಪಾ ರಾಜಶೇಖರ್, ಕ್ಷೇತ್ರದ ಧರ್ಮಾಧಿಕಾರಿ ಎಂ.ಎಸ್.ನಂಜುಂಡಸ್ವಾಮಿ ಹಾಜರಿದ್ದರು.

LEAVE A REPLY

Please enter your comment!
Please enter your name here