ಮದ್ಯ ಕುಡಿಯಲು ಹಣ ಕೊಡಲಿಲ್ಲವೆಂದು ಹೆತ್ತಮ್ಮನನ್ನೇ ಕೊಂದ ಮಗ..!

107
Firstsuddi

ಕಲಬುರಗಿ : ಮದ್ಯ ಕುಡಿಯಲು ಹಣ ಕೊಡಲಿಲ್ಲವೆಂದು ಹೆತ್ತವಳ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕಲ್ಲೂರು ಕೆ.ಗ್ರಾಮದಲ್ಲಿ ನಡೆದಿದೆ.

ಇಂದು ನಸುಕಿನ ಜಾವ ಈ ಘಟನೆ ನಡೆದಿದ್ದು, ಭೀಮಬಾಯಿ ಪೂಜಾರಿ(75) ಕೊಲೆಯಾದ ತಾಯಿ. ಈಕೆಯ ಕಿರಿಯ ಪುತ್ರ ಯಲ್ಲಪ್ಪ ಪೂಜಾರಿ ಕೊಲೆ ಮಾಡಿದ್ದಾನೆ.

ಘಟನೆ ಸಂಬಂಧ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.