ಸಹಪಾಠಿಗಳಿಂದ ಅವಮಾನ : ಮನನೊಂದು ಆತ್ಮಹತ್ಯೆಗೆ ಶರಣಾದ ಹತ್ತನೇ ತರಗತಿ ವಿದ್ಯಾರ್ಥಿ!

176
firstsuddi

ಹಾಸನ: ಸಹಪಾಠಿಗಳಿಂದ ಅವಮಾನವಾಯಿತು ಎಂದು ಮನನೊಂದು ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ತಾಲ್ಲೂಕಿನ ಹರುವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹರ್ಷಿತ್ ಗೌಡ (16) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕ.. ಹಾಸನ ತಾಲ್ಲೂಕಿನ ಕಂಚಮಾರನಹಳ್ಳಿ ಬಳಿಯ ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ. ಹರ್ಷಿತ್ಗೆ ಒಂದು ವರ್ಷದ ಹಿಂದೆ ಸ್ಟ್ರೋಕ್ ಆಗಿತ್ತು. ಹರ್ಷಿತ್ ನನ್ನು ಶಾಲೆಯಲ್ಲಿ ಸಹಪಾಠಿ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಮಾ.19 ರಂದು ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು.

ಘಟನೆಯಿಂದ ಬೇಸರಗೊಂಡು ಹರ್ಷಿತ್ ಶಾಲೆ ಬಿಟ್ಟು ತನ್ನ ಊರಿಗೆ ಹೋಗಿದ್ದ. ನಿನ್ನೆ ಜಾನುವಾರುಗಳನ್ನು ಮೇಯಿಸಲು ಹೋದಾಗ ಜಮೀನಿನ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.