ದೇಶದಲ್ಲಿ 47,262 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,17,34,058ಕ್ಕೆ ಏರಿಕೆ…

117
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 47,262 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,17,34,058ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 275 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,60,441ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,17,34,058 ಮಂದಿ ಸೋಂಕಿತರ ಪೈಕಿ ಈವರೆಗೆ 1,12,05,160 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.