ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ ಸಾವು!

105
Firstsuddi

ಮಂಗಳೂರು : ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ವಿನ್ಸಿ(20) ಮೃತ ವಿದ್ಯಾರ್ಥಿನಿ. ಈಕೆ ಬೆಳ್ತಂಗಡಿ ತಾಲ್ಲೂಕಿನ ಗಂಡಿಬಾಗಿಲು ದೇವಗಿರಿ ನಿವಾಸಿ ಬಿಜು ಎಂಬವರ ಪುತ್ರಿಯಾಗಿದ್ದಾಳೆ . ಗುರುದೇವ ಕಾಲೇಜಿನಲ್ಲಿ ಅಂತಿಮ ಬಿ.ಕಾಂ. ಓದುತ್ತಿದ್ದಳು.

ಮಾ.14 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಅವಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ,ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾಳೆ. ವಿನ್ಸಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.