ದೇಶದಲ್ಲಿ 59,118 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,18,46,652ಕ್ಕೆ ಏರಿಕೆ…

109
First Suddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 59,118 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,18,46,652ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 257 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,60,949ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,18,46,652 ಮಂದಿ ಸೋಂಕಿತರ ಪೈಕಿ ಈವರೆಗೆ 1,12,64,637 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.