ಚಿಕ್ಕಮಗಳೂರು : ರಾಜ್ಯ ಸರ್ಕಾರ ಮಾದ್ಯಮದ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣಕ್ಕೆ ಹುನ್ನಾರ ನಡೆಸಿದೆ : ಎಚ್.ಎಚ್.ದೇವರಾಜ್.

195
firstsuddi

ಚಿಕ್ಕಮಗಳೂರು : ಪತ್ರಕರ್ತರ ವೈಯಕ್ತಿಕ ಮಾಹಿತಿಗಳನ್ನು ಕಲೆಹಾಕಲು ಮುಂದಾಗುವ ಮೂಲಕ ರಾಜ್ಯ ಸರ್ಕಾರ ಮಾದ್ಯಮದ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣಕ್ಕೆ ಹುನ್ನಾರ ನಡೆಸಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್ ಆರೋಪಿಸಿದ್ದಾರೆ.

ಸಮಾಜದ ಅಂಕುಡೊಂಕುಗಳನ್ನು ತಿದ್ದುವುದರ ಜೊತೆಗೆ ಸಮಸ್ಯೆಗಳನ್ನು ಜನರಿಗೆ ತಲುಪಿಸುವ ಮೂಲಕ ಆಳುವ ಸರ್ಕಾರಗಳನ್ನು ಎಚ್ಚರಿಸುವ ಕೆಲಸ ಮಾಡುತ್ತಿರುವ ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದೇ ಕರೆಯಲ್ಪಡುವ ಪತ್ರಿಕಾರಂಗವನ್ನು ಪತ್ರಕರ್ತರ ವೈಯಕ್ತಿಕ ಮಾಹಿತಿ ಕಲೆಹಾಕುವ ಮೂಲಕ ರಾಜ್ಯ ಸರ್ಕಾರ ಧಮನ ಮಾಡಲು ಹೊರಟಿಸಿರುವುದು ಖಂಡನೀಯ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಸಲೀಲೆ ಸಿಡಿ ಪ್ರಕರಣವನ್ನು ನೆಪವಾಗಿಟ್ಟುಕೊಂಡು ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಧಮನ ಮಾಡಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದಿರುವ ದೇವರಾಜ್ ಬಿಜೆಪಿ ಪಕ್ಷ ಇದೇ ರೀತಿ ಮುಂದುವರೆದಲ್ಲಿ ದೇಶದ ಪ್ರಜಾಪ್ರಭುತ್ವ ಕೆಲವೇ ದಿನಗಳಲ್ಲಿ ಕಣ್ಮರೆಯಾಗಿ ಸರ್ವಾಧಿಕಾರಿ ಧೋರಣೆ ಆಡಳಿತ ಸ್ಥಾಪನೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.

ಪತ್ರಕರ್ತರ ಮಾಹಿತಿಗಳನ್ನು ಕಲೆಹಾಕಲು ಮುಂದಾಗುವ ಮೂಲಕ ರಾಜ್ಯ ಸರ್ಕಾರ ಪರೋಕ್ಷವಾಗಿ ಮಾದ್ಯಮವನ್ನು ಕಟ್ಟಿಹಾಕುವುದರ ಜೊತೆಗೆ ಪತ್ರಕರ್ತರನ್ನು ಬ್ಯಾಕ್ಲಮೇಲ್ ಮಾಡಲು ಹೊರಟಿದೆ ಎಂದು ಟೀಕಿಸಿದ್ದಾರೆ.