ಬೆಳಗಾವಿ : ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ.

101
firstsuddi

ಬೆಳಗಾವಿ : ಲೋಕಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿಗೆ ಹಸಿರು ಶಾಲು ಧರಿಸಿ ಆಗಮಿಸಿದ ಸತೀಶ ಜಾರಕಿಹೊಳಿ ಅವರು ಚುನಾವಣೆ ಅಧಿಕಾರಿ ಡಾ. ಹರೀಶಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಎಸ್.ಆರ್.ಪಾಟೀಲ, ಎಂ.ಬಿ.ಪಾಟೀಲ, ಆರ್.ವಿ. ದೇಶಪಾಂಡೆ, ಲಕ್ಷ್ಮಿ ಹೆಬ್ಬಾಳಕರ್, ಮುಂತಾದವರು ಸತೀಶ್ ಜಾರಕಿಹೊಳಿ ಅವರಿಗೆ ನಾಮಪತ್ರ ಸಲ್ಲಿಕೆಯಲ್ಲಿ ಜೊತೆ ಇದ್ದರು.