ದೇಶದಲ್ಲಿ 56,211 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,20,95,855ಕ್ಕೆ ಏರಿಕೆ…

90
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 56,211 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,20,95,855ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 271 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,62,114ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,20,95,855 ಮಂದಿ ಸೋಂಕಿತರ ಪೈಕಿ ಈವರೆಗೆ 1,13,93,021 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.